Translate

Wednesday 15 October 2014

ಗಾಲಿಬನೇ ಒಂದು ಕವಿತೆ!!!

ನಿಗಿನಿಗಿಯಾಗಿ ಬರೆದ ಗಾಲಿಬನ ಕಾವ್ಯ ಮೆಹಖಾನೆಗೆ ಹೋಗಿಯೂ ಮತ್ತೇರಿಸಲಿಲ್ಲ, ಕಾಬಾಕ್ಕೆ ಹೋಗಿಯೂ ಧ್ಯಾನಸ್ಥವಾಗಲಿಲ್ಲ, ಅರಮನೆಯಲ್ಲಿದ್ದೂ ಅಬ್ಬರಿಸಲಿಲ್ಲ, ಗುರುಮನೆಯ ಹಂಗಂತೂ ಇರಲೇ ಇಲ್ಲ. ಅದು ಗಾಲಿಬನ ಎದೆಯಾಳದಿಂದ ಬೆಂಕಿ ಹೂಗಳಂತೆ ಅರಳಿ, ಮತ್ತೆ ಅವನನ್ನೇ ಆಪೋಷಣ ತೆಗೆದುಕೊಂಡು ಕೆರಳಿತು.

Saturday 19 July 2014

Who is 'SHE'?

 
Who is ‘she’, who played all possible roles in my life, who is present at every step in the journey of my life but who remained as a buried treasure without being available to the quest called research?

Sunday 13 July 2014

ಇವಳೆಂದರೆ. . . .?!

ಇವಳ ಕುರಿತು ಬರೆದಷ್ಟು ಕವಿತೆಗಳನ್ನು ದೇವರ ಕುರಿತೂ ಬರೆಯಲಿಲ್ಲ. ಕರೆದಲ್ಲಿ ಬಂದು ನಾನು ಕೈ ಹಿಡಿದವರನ್ನೆಲ್ಲ ಒಡಹುಟ್ಟಿದವರಂತೆ ತಬ್ಬಿ, ತನ್ನಿಂದ ಸಾಧ್ಯವಾದುದನ್ನು ನೀಡಿ, ನಿರ್ಮೋಹಿಯಾದವಳು. ಹೋದಲೆಲ್ಲ ಕಸ ಗುಡಿಸಿ, ಹೂ-ಗಿಡ ನೆಟ್ಟು, ಪ್ರಾರ್ಥನೆ-ಪೂಜೆಗಳನ್ನು ಮಾಡಿ, ಗೂಡುಗಳನ್ನು ಗುಡಿಗಳಾಗಿಸಿದವಳು. ಖಂಡಿತ, ಇವಳ ಬಾಳೆನ್ನುವುದು ಹಲವರು ಸುರಿದ ಭಿಕ್ಷೆ, ಅಷ್ಟೆ ಸತ್ಯ, ಆ ಭಿಕ್ಷೆಯಿಂದ ಅವಳು ಅವರಿಗೆ ನೀಡಿದ ನೆಮ್ಮದಿಯ, ಮರ್ಯಾದೆಯ, ಮೈ-ಮಾನದ ಅನ್ನ.

Saturday 28 June 2014

I SHED MYSELF

    You made

    Me restless in your search
    I go for you
    Every evening after the suns march


    O my star
    Whom thou followed
    The dawn or thyself
    For thee I shed myself.

Thursday 26 June 2014

ದಾಂಪತ್ಯ


ಕನಿಷ್ಟ ತನ್ನ ಸ್ವಯಂ ಆಂಗಿಕ ಮಿತಿಗಳಿಗೂ ಬದ್ಧಳಾಗದ ಯಾವ ಹೆಣ್ಣನ್ನೂ, ಯಾವ ಕ್ರಾಂತಿ ಪುರುಷರೂ ಉದ್ಧರಿಸಲು ಸಾಧ್ಯವಿಲ್ಲ. ಸಂಸ್ಕತಿಯ ತೊಟ್ಟಿಲಾದ ಮಹಿಳೆ, ಸಂಸಾರದ ಗುಟ್ಟು ಅಥವಾ ರಟ್ಟು. ಎರಡಕ್ಕೂ ಹೊಣೆಗಾರಳಾಗಿದ್ದಾಳೆ. ದಾಂಪತ್ಯ ಅವಳ ಕೈಯಲ್ಲಿರುವ ಹಾಲಿನ ಬಟ್ಟಲು. ಅದನ್ನು ಹುಳಿಯಾಗಿಸುವ ಅಥವಾ ಬದುಕಾಗಿಸುವ ಸಾಧ್ಯತೆ ಅವಳ ವಿವೇಚನೆಯನ್ನು ಆಧರಿಸಿದೆ. 

Monday 23 June 2014

ಪ್ರೀತಿಯಂಥ ವಸ್ತು ಜಗದಲ್ಲಿ ಕಾಣೆ

ಎಲ್ಲ ಕಾಯುವಿಕೆ, ಕೂಡಿಸುವಿಕೆ, ಮತ್ತೆ ಮತ್ತೆ ಕ್ಷಮಿಸುವಿಕೆಗಳ ಹಿಂದೆ ಬರೀ ಕಾಸಿನ, ಕಾಮದ, ಲಾಭದ ಲೆಕ್ಕಾಚಾರಗಳೇ ಇರುವುದಿಲ್ಲ. ಪ್ರಪಂಚದಲ್ಲಿ ವಿನಾ ಕಾರಣ ಪ್ರೀತಿಸುವವರಿದ್ದಾರೆ. ಅವರೆಲ್ಲ ಬರೀ ಗಂಡಸರಲ್ಲ. ಅವರೊಳಗಿನ ತಾಯಿ ಅವರ ದೌರ್ಬಲ್ಯವಲ್ಲ. ಇಂಥ ಪ್ರೀತಿಯನ್ನು ಉಡಾಫೆ ಎಂದುಕೊಳ್ಳುವುದು ಉಡಿಯಲ್ಲಿ ಪಾಪ ಕಟ್ಟಿಕೊಳ್ಳುವುದು ಎರಡೂ ಒಂದೇ. ಇದು ಇನ್ನಾವುದೋ ಜನ್ಮಕ್ಕೆ ಕೈ ಕಳೆದುಕೊಳ್ಳುವ ಸುಳಿವು. 

Saturday 14 June 2014

ಬಳಸಿ ಬಿಸಾಡುವ ಕಾರ್ಪೊರೇಟ್. . .

      ನಮ್ಮ ಸುತ್ತಲಿನ ಸತ್ಯವನ್ನು ದೂರಿಕರಿಸಿ ದೂರದ ಅವಾಸ್ತವವನ್ನು ನಂಬುವ ವರ್ತಮಾನದ ಯುವ ಜನಾಂಗ, ಕಾರ್ಪೊರೇಟ್ ವಲಯದ ಬಳಸಿ ಬಿಸಾಡುವ ಸಿದ್ಧಾಂತಕ್ಕೆ ಮರುಳಾಗಿದ್ದಾರೆ. ಅವಕಾಶಗಳ ಭ್ರಮೆಯನ್ನು ಹುಟ್ಟಿಸುವ ಈ ಬಿಕ್ಕಟ್ಟು, ಅದೇ ಕಾರ್ಪೊರೇಟ್ ವಲಯದಿಂದ, ಮತ್ತೆ ಅದೇ ಸಿದ್ಧಾಂತದಿಂದ ಮೋಸಕ್ಕೆ ಹೋಗುವ ಸಾಧ್ಯತೆಗಳನ್ನು ಹೆಚ್ಚಿಸುತ್ತಿದೆ. ಓಡಿಹೋಗಲಾಗದ, ನಿಂತು ಬದುಕಲಾಗದ ಆದರೆ ನಿರಂತರ ಹುಚ್ಚು ಹುಡುಕಾಟಕ್ಕೆ ಹಚ್ಚುವ ಈ ಹವ್ಯಾಸ, ಎಲೆಕ್ಟ್ರಾನಿಕ್ ಮಾದ್ಯಮಗಳನ್ನು ನಂಬಿಕೊಂಡಿರುವವರಿಗೆ ಹುಡುಗಾಟವೆನ್ನಿಸಿದೆ. ಕಣ್ಣು ಕೋರೈಸುವ ಟ್ಯಾಬ್, ಮೋಬೈಲ್, ಕಂಪ್ಯೂಟರ್‍ಗಳು ಕಣ್ಣೀರೊರೆಸುವುದಿಲ್ಲ. ಫ್ಯಾಶನ್‍ನನ್ನು ಕುರಿತು ಮಾತಾಡುವ ಈ ಲೋಕ ಪ್ಯಾಶೆನ್ ಕುರಿತು ಮನುಷ್ಯನನ್ನು ಕೇಂದ್ರಿಕರಿಸುವುದಿಲ್ಲ. ಸಹನೆಯಂತೂ ಸತ್ತುಹೋದ ವಿಚಾರ. ಸಾಮಾಜಿಕ ತಾಣಗಳೆಂದು ಗುರುತಿಸಲ್ಪಡುವ ಈ ಅಂತರ್‍ಜಾಲ ತಾಣಗಳು ನಿಜವಾದ ಸಾಮಾಜಿಕತೆಯ ಮನುಷ್ಯ ಸೌಂದರ್ಯವನ್ನು ಕೊಂದು ಇರುವ ಮನೆಯಲ್ಲಿಯೇ ಒಬ್ಬ ಇನ್ನೊಬ್ಬನೊಂದಿಗೆ ಮಾತನಾಡದಂತೆ ಮಾಡಿ ಆತನನ್ನು ಭ್ರಮೆಗಳಿಂದ ತುಂಬುತ್ತದೆ. ನಾವು ಹೇಗೆ ಕಾಣಿಸಿಕೊಳ್ಳಬೇಕು ಎನ್ನುವುದನ್ನು ತಿಳಿಸುವ ಈ ಮಾರ್ಗ ನಾನು ಏನಾಗಬೇಕು ಎನ್ನುವುದಕ್ಕೆ ಕನ್ನಡಿ ಹಿಡಿಯುವುದಿಲ್ಲ. ಎಲೆಕ್ಟ್ರಾನಿಕ್ ಜಗತ್ತು ನಮ್ಮಲ್ಲಿ ಧೈರ್ಯವನ್ನು ಬೆಳೆಸಲಿಲ್ಲ, ಹೇಸಿ ಧೈರ್ಯವನ್ನ, ಭಂಡ ಧೈರ್ಯವನ್ನ ಬೆಳೆಸಿತು. ಆಳ ಅಧ್ಯಯನದ ಅವಶ್ಯಕತೆಯನ್ನು ದೂರಿಕರಿಸಿ ಮುಂಜಾನೆ ಕುಡಿಯುವ ಚಹಾ ಕುರಿತಾದ ತಿಳುವಳಿಕೆಗೂ ತನ್ನನ್ನು ಮೊರೆ ಹೋಗುವಂತೆ ಮಾಡಿತು. ದುಡ್ಡು, ಅವಕಾಶ ಎನ್ನುವ ಪದಗಳ ಬೆನ್ನು ಹತ್ತಿ ಆತ್ಮವನ್ನು ಧಿಕ್ಕರಿಸಿ ಅನ್ಯರ ಭಾವನೆಗಳನ್ನು ಅವಹೇಳಿಸಿ ಓಡಿಹೋಗುವ ನಿರ್ಲಜ್ಜತೆಯನ್ನು ಬೆಳೆಸಿತು. ಮುಂದಿನ ಮರೀಚಿಕೆಯನ್ನು ಮೆಚ್ಚಿಕೊಂಡವರು ಹಿಂದಣ ಅನಂತವನ್ನು ಅಸಹ್ಯಗೊಳಿಸುವ ಆತ್ಮ ಭ್ರಷ್ಟತೆಯನ್ನು ಬೆಳೆಸಿತು. ಈ ರೀತಿ ಬುಡವಿಲ್ಲವಾಗಿರುವ ಈ ನನ್ನ ಎಳೆಯ ಜಗತ್ತನ್ನು ನಾನು ವಾಟೆವರ್ ಜನರೇಶನ್ ಎನ್ನುತ್ತೇನೆ, ಎನ್ನುತ್ತಾರೆ ನನ್ನೊಂದಿಗಿದ್ದ ಗೆಳೆಯ ನವೀನ್. ಇದೊಂದು ಶೇಮ್‍ಲೆಸ್ ಸೋಸಾಯಿಟಿ ಎನ್ನುತ್ತಾರೆ ಹಿರಿಯ ಚಿಂತಕಿ ಡಾ.ಇಂದಿರಾ. ಈ ಬಿಕ್ಕಟ್ಟೆ ನಮ್ಮ ಮೂಲ. ಏಕೆಂದರೆ ವರ್ತಮಾನದ ಹೂಗಳನ್ನು ಧಿಕ್ಕರಿಸಿ ಭವಿಷ್ಯದ ಹಣ್ಣುಗಳ ಕನಸು ಕಾಣಲಾಗುವುದಿಲ್ಲ ಹಾಗೆಯೇ ನಮ್ಮ ಮುಂದೆಯೇ ನಾಶವಾಗುವ ಯುವಜನಾಂಗವನ್ನು ನಿರ್ಲಕ್ಷಿಸಿ ಭವಿಷ್ಯದ ಭವ್ಯ ಭಾರತವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.